ACCIK ಸಂಸ್ಥೆಯ ಪರಿಚಯ

ಆದಿಜಾಂಬವ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್, ಕರ್ನಾಟಕ

ಆದಿಜಾಂಬವ ಸಮುದಾಯದಲ್ಲಿ ಅನೇಕ ಪ್ರತಿಭಾವಂತ ಯುವಕರು, ಉದ್ಯಮಿಗಳು ಮತ್ತು ವೃತ್ತಿಪರರು ಅವಕಾಶಗಳ ಕೊರತೆಯಿಂದ ಹಿಂದೆ ಉಳಿಯುತ್ತಿರುವುದನ್ನು ಗಮನಿಸಿ, ಸಂಸ್ಥಾಪಕರು, ಅವರಿಗೆ ಮಾರ್ಗದರ್ಶನ, ತರಬೇತಿ, ಉದ್ಯೋಗ ಮತ್ತು ಕೈಗಾರಿಕಾ ಅವಕಾಶಗಳನ್ನು ಒದಗಿಸುವ ಉದ್ದೇಶದೊಂದಿಗೆ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.
ಆದಿಜಾಂಬವ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್, ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಸಂಸ್ಥೆಯಾಗಿದೆ. ಆದಿಜಾಂಬವ ಸಮುದಾಯದ ಸಾಮಾಜಿಕ, ಆರ್ಥಿಕ,ಔದ್ಯೋಗಿಕ, ಶೈಕ್ಷಣಿಕ, ಮತ್ತು‌ರಾಜಕೀಯ ಅಭಿವೃದ್ಧಿಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಾಪಿತವಾದ ಈ ಸಂಸ್ಥೆಯು ಉದ್ಯಮಶೀಲತೆ, ಕೈಗಾರಿಕಾ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೌಶಲ್ಯ ವಿಕಸನ ಹಾಗೂ ಸಮುದಾಯದ ಸಬಲೀಕರಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.
ಆದಿಜಾಂಬವ ಸಮುದಾಯದ ಎಲ್ಲಾ ಜನರು ಆರ್ಥಿಕ ಬೆಳವಣಿಗೆಯಲ್ಲಿ ಪಾಲ್ಗೊಳ್ಳಬೇಕು ಎಂಬ ಗುರಿಯನ್ನು ಹೊಂದಿರುವ ಈ ಸಂಸ್ಥೆಯು, ಯುವಕರು, ಮಹಿಳೆಯರು, ರೈತರು, ಕಲಾವಿದರು, ಸಣ್ಣ ಉದ್ಯಮಿಗಳು ಮತ್ತು ವೃತ್ತಿಪರರಿಗೆ ವಿವಿಧ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಪ್ರಯತ್ನಿಸುತ್ತಿದೆ.
ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಸರ್ಕಾರ, ಹಣಕಾಸು ಸಂಸ್ಥೆಗಳು, ಹಾಗೂ ಆದಿಜಾಂಬವ ಸಮುದಾಯದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಆದಿಜಾಂಬವ ಚೇಂಬರ್, ಕರ್ನಾಟಕದ ಆದಿಜಾಂಬವ ಸಮುದಾಯದ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುವ ಗುರಿಯನ್ನು ಹೊಂದಿದೆ.